Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಎಂದಿಗೂ ಆಶಾಭಂಗಪಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಶ್ರಯಕೋರಿ ಹೇ ಪ್ರಭು, ನಾ ಬಂದಿರುವೆ I ಆಶಾಭಂಗವಾಗದಿರಲೆಂದು ನಾ ಬೇಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನ ಮರೆ ಹೊಕ್ಕಿದ್ದೇನೆ; ಎಂದಿಗೂ ಆಶಾಭಂಗಪಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮಲ್ಲಿಯೇ ನಾನು ನನ್ನ ಭರವಸೆಯನ್ನಿಟ್ಟಿದ್ದೇನೆ. ನನಗೆ ಎಂದೂ ಆಶಾಭಂಗವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:1
11 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥವು ಹೇಳುವುದೇನೆಂದರೆ, “ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಆ ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ”


ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


ಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು