Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:13 - ಪರಿಶುದ್ದ ಬೈಬಲ್‌

13 ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಪ್ರಾಣಕ್ಕೆ ಕಂಟಕರಾದವರು ಆಶಾಭಂಗಪಟ್ಟು ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದಾಪಮಾನಗಳು ಕವಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:13
12 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.


ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.


ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.


ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”


ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.


ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.


ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು