Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:15 - ಪರಿಶುದ್ದ ಬೈಬಲ್‌

15 ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲಸಾಧ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:15
18 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ನಿನ್ನ ನೀತಿಯ ಕುರಿತು ನಾನು ಜನರಿಗೆ ಹೇಳುವೆನು; ಪ್ರತಿದಿನವೂ ನಿನ್ನನ್ನು ಸ್ತುತಿಸುವೆನು.


ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.


ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು.


ನಿನ್ನ ಹೆಸರು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತದೆ. ಅವರು ನಿನ್ನ ನೀತಿಯನ್ನು ಸ್ತುತಿಸುವರು.


ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.


ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.


ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.


ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!


ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.


ಆಗ ನೀನು ಯೋಗ್ಯವಾಗಿ ನಡೆದುಕೊಳ್ಳುವೆ; ತಿಳುವಳಿಕೆಯಿಂದ ಮಾತಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು