ಕೀರ್ತನೆಗಳು 71:20 - ಪರಿಶುದ್ದ ಬೈಬಲ್20 ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂವಿುಯ ಅಧೋಭಾಗದಿಂದ ಮೇಲೆತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅನೇಕ ಕಠಿಣವಾದ ಇಕ್ಕಟ್ಟುಗಳನ್ನು ನೋಡ ಮಾಡಿದ ನನ್ನನ್ನು ನೀವು ತಿರುಗಿ ಬದುಕಿಸಿದ್ದೀರಿ. ಭೂಮಿಯ ಅಧೋಭಾಗದಿಂದ ಪುನಃ ನನ್ನನ್ನು ಮೇಲಕ್ಕೆ ಎತ್ತುವಿರಿ. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”