ಕೀರ್ತನೆಗಳು 71:22 - ಪರಿಶುದ್ದ ಬೈಬಲ್22 ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲ್ಯರ ಸದಮಲಸ್ವಾವಿುಯೇ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು. ನಿಮ್ಮ ನಂಬಿಗಸ್ತಿಕೆಗಾಗಿ ವೀಣೆಯಿಂದ ಕೊಂಡಾಡುವೆನು. ಇಸ್ರಾಯೇಲರ ಪರಿಶುದ್ಧರೇ, ಕಿನ್ನರಿಯಿಂದ ನಿಮ್ಮನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.