ಕೀರ್ತನೆಗಳು 72:10 - ಪರಿಶುದ್ದ ಬೈಬಲ್10 ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.