ಕೀರ್ತನೆಗಳು 72:15 - ಪರಿಶುದ್ದ ಬೈಬಲ್15 ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಬಾಳಲಿ; ಶೆಬಾ ಪ್ರಾಂತದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳುಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ. ಅಧ್ಯಾಯವನ್ನು ನೋಡಿ |
ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.