ಕೀರ್ತನೆಗಳು 72:17 - ಪರಿಶುದ್ದ ಬೈಬಲ್17 ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ. ಅಧ್ಯಾಯವನ್ನು ನೋಡಿ |