ಕೀರ್ತನೆಗಳು 72:19 - ಪರಿಶುದ್ದ ಬೈಬಲ್19 ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19-20 ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್. ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.