ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.