Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:13 - ಪರಿಶುದ್ದ ಬೈಬಲ್‌

13 ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ? ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡದ್ದೂ ಶುದ್ಧತ್ವದಲ್ಲಿ ಕೈತೊಳಕೊಂಡದ್ದೂ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:13
12 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ.


ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.


ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.


ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು.


ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.


ದೇವರು ನನ್ನನ್ನು ಮಣ್ಣಿನ ಗುಂಡಿಗೆ ತಳ್ಳಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯವಾಗುವಂತೆ ಮಾಡುವನು.


“ನಾನು ದೂರು ಹೇಳುವುದಿಲ್ಲ. ನನ್ನ ನೋವನ್ನು ಮರೆತು ನನ್ನ ಮುಖವನ್ನು ಮಾರ್ಪಡಿಸಿಕೊಂಡು ನಗುವೆನೆಂದರೆ,


ಅಪರಾಧಿಯೆಂದು ಈಗಾಗಲೇ ನನಗೆ ತೀರ್ಪಾಗಿದೆ. ಹೀಗಿರಲು ನಾನೇಕೆ ವ್ಯರ್ಥ ಪ್ರಯತ್ನ ಮಾಡಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು