ಕೀರ್ತನೆಗಳು 73:9 - ಪರಿಶುದ್ದ ಬೈಬಲ್9 ಆ ಗರ್ವಿಷ್ಠರು ತಮ್ಮನ್ನು ದೇವರುಗಳೆಂದು ಭಾವಿಸಿಕೊಂಡಿದ್ದಾರೆ, ತಾವೇ ಭೂಮಿಯ ಅಧಿಪತಿಗಳೆಂದು ಆಲೋಚಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ. ಅಧ್ಯಾಯವನ್ನು ನೋಡಿ |
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.