Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:17 - ಪರಿಶುದ್ದ ಬೈಬಲ್‌

17 ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಗಾಲವನ್ನೂ ನಿರ್ಮಿಸಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜಗದೆಲ್ಲೆ ಮೇರೆಗಳನು ನಿಗದಿ ಮಾಡಿದೆ ನೀನು I ಶೀತೋಷ್ಣಕಾಲಗಳನು ನೇಮಿಸಿದವನು ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಭೂವಿುಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಶೀತೋಷ್ಣಕಾಲಗಳನ್ನು ನೇವಿುಸಿದವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ. ಬೇಸಿಗೆ ಮತ್ತು ಚಳಿಗಾಲವನ್ನು ನೀವು ನಿರ್ಮಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:17
6 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.


ಯೋಬನೇ, ಭೂಮಿಯ ವಿಶಾಲತೆಯನ್ನು ನೋಡಿರುವಿಯಾ? ನೀನು ನಿಜವಾಗಿಯೂ ಅರ್ಥಮಾಡಿಕೊಳ್ಳುವಿಯಾ? ನಿನಗೆ ಇದೆಲ್ಲಾ ತಿಳಿದಿದ್ದರೆ, ನನಗೆ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು