Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:3 - ಪರಿಶುದ್ದ ಬೈಬಲ್‌

3 ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಿಜಯಮಾಡು ಪಾಳುಬಿದ್ದಿರುವ ಹಳೆಯ ಆಲಯಕೆ I ಶತ್ರು ಕೆಡವಿಹನು ನೋಡು ಗರ್ಭಗುಡಿಯನೇ ಕೆಳಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ಬಿಜಯಮಾಡು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿತ್ಯ ನಾಶವಾದ ಈ ಪ್ರದೇಶಗಳ ಕಡೆಗೂ ಈ ಪರಿಶುದ್ಧ ನಿವಾಸವನ್ನು ವೈರಿಗಳು ಹಾಳುಮಾಡಿದ್ದರ ಕಡೆಗೂ ನಿಮ್ಮ ಹೆಜ್ಜೆಗಳನ್ನು ತಿರುಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:3
26 ತಿಳಿವುಗಳ ಹೋಲಿಕೆ  

“ಯೆಹೋವನೇ, ನಿನ್ನ ಸೇವಕನಾದ ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕೋರಿ ಮಾಡುವ ನನ್ನ ಪ್ರಾರ್ಥನೆಯನ್ನು ಲಾಲಿಸು. ನಿನ್ನ ಪವಿತ್ರ ಸ್ಥಳಕ್ಕಾಗಿ ಒಳ್ಳೆಯದನ್ನು ಮಾಡು. ಆ ಕಟ್ಟಡವನ್ನು ನಾಶಮಾಡಲಾಗಿದೆ. ಯೆಹೋವನೇ, ಈ ಒಳ್ಳೆಯ ಕಾರ್ಯಗಳನ್ನು ನಿನ್ನ ಹಿತಕ್ಕಾಗಿ ಮಾಡು.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ.


ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಎದ್ದು ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು.


ನನ್ನ ಒಡೆಯನೇ, ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.


ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕುತ್ತಿಗೆಗಳ ಮೇಲೆ ಇಟ್ಟರು.


ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು