ಕೀರ್ತನೆಗಳು 74:7 - ಪರಿಶುದ್ದ ಬೈಬಲ್7 ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿಹಾಕಿ ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ ನೆಲಸಮಗೊಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.