“ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಲು ಬಂದಿದ್ದಾರೆ” ಎಂದು ಹೇಳಿದನು.