ಕೀರ್ತನೆಗಳು 75:7 - ಪರಿಶುದ್ದ ಬೈಬಲ್7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.