Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:9 - ಪರಿಶುದ್ದ ಬೈಬಲ್‌

9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬವಂಶದವರ ದೇವರನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:9
8 ತಿಳಿವುಗಳ ಹೋಲಿಕೆ  

ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು. ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು.


ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ; ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ.


ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನಮ್ಮ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು!


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ನೀನು ಆ ಲೋಟದಿಂದ ಕುಡಿಯುವೆ. ಕಡೆಯ ತೊಟ್ಟಿನವರೆಗೂ ನೀನು ಕುಡಿಯುವೆ. ನೀನು ಆ ಲೋಟವನ್ನು ಒಡೆದುಹಾಕುವೆ. ನಿನ್ನ ಸ್ತನಗಳನ್ನು ಬಗಿದುಕೊಳ್ಳುವೆ. ಒಡೆಯನೂ ಯೆಹೋವನೂ ಆದ ನಾನು ಇದನ್ನು ಹೇಳುವದರಿಂದ ಇದು ನಡೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು