Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:1 - ಪರಿಶುದ್ದ ಬೈಬಲ್‌

1 ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಯೆಹೂದದೇಶದಲ್ಲಿ ಖ್ಯಾತಿಗೊಂಡವನು; ಇಸ್ರಾಯೇಲ್ಯರಲ್ಲಿ ಆತನ ನಾಮವು ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:1
18 ತಿಳಿವುಗಳ ಹೋಲಿಕೆ  

ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.


ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು.


ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.


ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು.


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು