ಕೀರ್ತನೆಗಳು 76:10 - ಪರಿಶುದ್ದ ಬೈಬಲ್10 ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.