ಕೀರ್ತನೆಗಳು 76:6 - ಪರಿಶುದ್ದ ಬೈಬಲ್6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ. ಅಧ್ಯಾಯವನ್ನು ನೋಡಿ |
ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.