ಕೀರ್ತನೆಗಳು 77:10 - ಪರಿಶುದ್ದ ಬೈಬಲ್10 ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?” ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಂತರ ನಾನು ಯೋಚಿಸಿದ್ದೇನಂದರೆ, “ಹೀಗೆ ನೆನಸಿದ್ದು ನನ್ನ ಬಲಹೀನತೆಯೇ. ಮಹೋನ್ನತ ದೇವರ ಬಲಗೈಯ ಪರಾಕ್ರಮದ ವರ್ಷಗಳನ್ನು ನಾನು ಸ್ಮರಿಸುವೆನು. ಅಧ್ಯಾಯವನ್ನು ನೋಡಿ |
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!