ಕೀರ್ತನೆಗಳು 77:2 - ಪರಿಶುದ್ದ ಬೈಬಲ್2 ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.