Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:1 - ಪರಿಶುದ್ದ ಬೈಬಲ್‌

1 ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ I ಗಮನಕೊಡಿ ನಾ ಹೇಳುವ ಮಾತುಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಜನರೇ, ನನ್ನ ಉಪದೇಶಕ್ಕೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:1
12 ತಿಳಿವುಗಳ ಹೋಲಿಕೆ  

ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


“ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.


ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


ದೇವರು ಹೀಗೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!


“ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು. ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.


ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು