Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:14 - ಪರಿಶುದ್ದ ಬೈಬಲ್‌

14 ಹಗಲಿನಲ್ಲಿ ಮೋಡದಿಂದಲೂ ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಗಲು ಮೋಡದಿಂದಲೂ ಇರುಳು ಬೆಂಕಿಯ ಬೆಳಕಿನಿಂದಲೂ ಅವರನ್ನು ಕರೆದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:14
8 ತಿಳಿವುಗಳ ಹೋಲಿಕೆ  

ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಅಗ್ನಿಸ್ತಂಭವನ್ನು ದಯಪಾಲಿಸಿದನು.


ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.


ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.


ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.


ಹೀಗೆ ಮೇಘವು ಯಾವಾಗಲೂ ದೇವದರ್ಶನಗುಡಾರವನ್ನು ಮುಚ್ಚಿಕೊಂಡಿರುವುದು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವುದು.


ನೀವು ಈ ಸ್ಥಳಕ್ಕೆ ಬರುವತನಕ ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಮರುಭೂಮಿಯಲ್ಲಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನೋಡಿದವರು, ನೀವೇ ಹೊರತು ನಿಮ್ಮ ಮಕ್ಕಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು