Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:15 - ಪರಿಶುದ್ದ ಬೈಬಲ್‌

15 ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಾಡಿನಾ ಕಗ್ಗಲ್ಲನು ಸೀಳಿ ಹೊರಡಿಸಿದನು ನೀರನು I ಆಳದ ಸರಸಿಯಿಂದೊ ಎಂಬಂತೆ ಅದನು ಕುಡಿಯಲಿತ್ತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:15
11 ತಿಳಿವುಗಳ ಹೋಲಿಕೆ  

ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯತೊಡಗಿತು!


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು