ಕೀರ್ತನೆಗಳು 78:24 - ಪರಿಶುದ್ದ ಬೈಬಲ್24 ಆಕಾಶದ ದ್ವಾರಗಳು ತೆರೆದು ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸುರಿಸಿದನು ಅವರ ಮೇಲೆ ಉಣಲು ಅನ್ನವನು I ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ ಉಣ್ಣಲಿಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.