ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.
ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.