Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:35 - ಪರಿಶುದ್ದ ಬೈಬಲ್‌

35 ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನೆನೆದರಾಗ ದೇವರೇ ತಮಗಾಶ್ರಯ ದುರ್ಗವೆಂದು I ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇವರು ತಮ್ಮ ಶರಣನೂ ಪರಾತ್ಪರನು ತಮ್ಮ ವಿಮೋಚಕನೂ ಆಗಿದ್ದಾನೆ ಎಂಬದನ್ನು ನೆನಪಿಗೆ ತಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:35
19 ತಿಳಿವುಗಳ ಹೋಲಿಕೆ  

“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.


ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.


ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು.


ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು.


ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.


ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ.


ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು