ಕೀರ್ತನೆಗಳು 78:37 - ಪರಿಶುದ್ದ ಬೈಬಲ್37 ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ. ಆತನ ಒಡಂಬಡಿಕೆಗೆ ಅವರು ನಂಬಿಗಸ್ತರಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ. ಅಧ್ಯಾಯವನ್ನು ನೋಡಿ |
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.