Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:63 - ಪರಿಶುದ್ದ ಬೈಬಲ್‌

63 ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಆಹುತಿಯಾದರವರ ಯುವಜನ ಅಗ್ನಿಗೆ I ವಿವಾಹವಾಗಲಿಲ್ಲ ಅವರ ಕನ್ಯೆಯರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರಿಗೆ ಶೋಭನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:63
8 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’


ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.


ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.


ಆ ಜನರು ಹೇಳಿದ್ದನ್ನು ಕೇಳಿ ಯೆಹೋವನು ಕೋಪಗೊಂಡನು. ಆತನು ಯಾಕೋಬ್ಯರ ಮೇಲೆಯೂ ಇಸ್ರೇಲರ ಮೇಲೆಯೂ ಕೋಪಗೊಂಡನು.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.


ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು