Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:64 - ಪರಿಶುದ್ದ ಬೈಬಲ್‌

64 ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಬಲಿಯಾದರವರ ಯಾಜಕರು ಶತ್ರುಕತ್ತಿಗೆ I ವಿಧವೆಯರು ರೋದಿಸಲಿಲ್ಲ ಅವರ ಸಾವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಅವರ ಯಾಜಕರು ಖಡ್ಗದಿಂದ ಸಂಹಾರವಾದರು. ಅವರ ವಿಧವೆಯರು ಗೋಳಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:64
9 ತಿಳಿವುಗಳ ಹೋಲಿಕೆ  

ದುಷ್ಟನ ಮಕ್ಕಳೂ ಇನ್ನೂ ಉಳಿದುಕೊಂಡಿದ್ದರೆ ಭಯಂಕರವಾದ ರೋಗಗಳಿಂದ ಸಾಯುವರು; ಅವರ ವಿಧವೆಯರು ಅವರಿಗೋಸ್ಕರ ದುಃಖಿಸುವುದಿಲ್ಲ.


ಆ ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.


ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.


ಏಲಿಯ ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂಬ ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ, ಆಕೆ ತನ್ನ ಮಗನಿಗೆ ಈಕಾಬೋದ್ ಎಂದು ಹೆಸರಿಟ್ಟಳು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು