Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:66 - ಪರಿಶುದ್ದ ಬೈಬಲ್‌

66 ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಸದೆಬಡಿದನಾತ ತನ್ನ ಶತ್ರುಗಳನು I ನಿತ್ಯನಿಂದೆಗೆ ಈಡುಮಾಡಿದನವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ತನ್ನ ಶತ್ರುಗಳನ್ನು ಮುರಿಬಡಿದು ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:66
5 ತಿಳಿವುಗಳ ಹೋಲಿಕೆ  

ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.


ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’”


ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.


ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.


ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು