ಕೀರ್ತನೆಗಳು 78:67 - ಪರಿಶುದ್ದ ಬೈಬಲ್67 ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 ವರ್ಜಿಸಿದನು ಜೋಸೆಫ್ ಕುಲದ ಗುಡಾರವನು I ತ್ಯಜಿಸಿದನು ಎಫ್ರಯಿಮ್ ಕುಲದಾ ಗುಡಾರವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)67 ಯೋಸೇಫಕುಲದ ಗುಡಾರವನ್ನು ವರ್ಜಿಸಿ ಎಫ್ರಾಯೀಮ್ ಕುಲವನ್ನು ತ್ಯಜಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ67 ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ, ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.