ಕೀರ್ತನೆಗಳು 78:71 - ಪರಿಶುದ್ದ ಬೈಬಲ್71 ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71 ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ71 ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ: