ಕೀರ್ತನೆಗಳು 78:9 - ಪರಿಶುದ್ದ ಬೈಬಲ್9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಫ್ರಯಿಮರು ಹೋದರು ಧನುರ್ಧಾರಿಗಳಾಗಿ I ಯುದ್ಧವೇಳೆಯಲಿ ಓಡೋಡಿದರು ಹಿಂದಿರುಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎಫ್ರಾಯೀಮ್ ಕುಲದವರು ಧನುರ್ಧಾರಿಗಳಾಗಿ ಹೋಗಿ ಯುದ್ಧಸಮಯದಲ್ಲಿ ಬೆಂಗೊಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ಯರ ಸೈನಿಕರು ಸುಮಾರು ಮೂವತ್ತು ಜನ ಇಸ್ರೇಲಿ ಸೈನಿಕರನ್ನು ಕೊಂದುಹಾಕಿದ್ದರು. ಆದ್ದರಿಂದ ಬೆನ್ಯಾಮೀನ್ಯರು, “ನಾವು ಮುಂಚಿನಂತೆ ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಆಗ ನಗರದಿಂದ ಹೊಗೆಯು ಸ್ತಂಭದೋಪಾದಿಯಲ್ಲಿ ಮೇಲೇರುತ್ತಿತ್ತು. ಬೆನ್ಯಾಮೀನ್ಯರು ಹಿಂತಿರುಗಿ ನೋಡಿದಾಗ ಅವರಿಗೆ ಹೊಗೆ ಕಾಣಿಸಿತು. ಇಡೀ ನಗರವು ಉರಿಯುತ್ತಿತ್ತು. ಆಗ ಇಸ್ರೇಲರ ಸೈನಿಕರು ಓಡಿಹೋಗುವುದನ್ನು ನಿಲ್ಲಿಸಿ ಯುದ್ಧ ಮಾಡುವುದಕ್ಕೆ ಪ್ರಾರಂಭಿಸಿದರು. ಬೆನ್ಯಾಮೀನ್ಯರು ಅಂಜಿದರು. ಎಂಥ ಭಯಾನಕ ಪರಿಸ್ಥಿತಿ ಉಂಟಾಗಿದೆ ಎಂಬುದು ಈಗ ಅವರಿಗೆ ಗೊತ್ತಾಯಿತು.
ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)