ಕೀರ್ತನೆಗಳು 79:1 - ಪರಿಶುದ್ದ ಬೈಬಲ್1 ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.