Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:10 - ಪರಿಶುದ್ದ ಬೈಬಲ್‌

10 ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:10
22 ತಿಳಿವುಗಳ ಹೋಲಿಕೆ  

ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು?


ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!


“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.


ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” ಎಂದು ಜೆರುಸಲೇಮ್ ನಗರ ಹೇಳುವುದು.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿಹೋಗುವವು.


ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” ಇದು ಯೆಹೋವನ ನುಡಿ.


“ನನ್ನ ಶತ್ರುಗಳು ಎಷ್ಟು ದುಷ್ಟರಾಗಿದ್ದಾರೆ ನೋಡು. ನನ್ನ ಎಲ್ಲ ಪಾಪಗಳ ನಿಮಿತ್ತ ನೀನು ನನಗೆ ಮಾಡಿದಂತೆ ಅವರಿಗೂ ಮಾಡಲು ನಿನಗೆ ಸಾಧ್ಯವಾಗುವುದು. ನಾನು ಪದೇಪದೇ ನರಳಾಡುತ್ತಿರುವುದರಿಂದ ನೀನು ಇದನ್ನು ಮಾಡಬೇಕು. ನನ್ನ ಹೃದಯವು ಅಸ್ವಸ್ಥಗೊಂಡಿರುವುದರಿಂದ ನೀನು ಇದನ್ನು ಮಾಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು