Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:11 - ಪರಿಶುದ್ದ ಬೈಬಲ್‌

11 ದಯವಿಟ್ಟು, ಸೆರೆಯಾಳುಗಳ ಗೋಳಾಟಕ್ಕೆ ಕಿವಿಗೊಡು! ಸಾಯಲಿರುವವರನ್ನು ನಿನ್ನ ಮಹಾಶಕ್ತಿಯಿಂದ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು I ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೆರೆಯವರ ನಿಟ್ಟುಸಿರು ನಿಮ್ಮ ಮುಂದೆ ಬರಲಿ. ನಿಮ್ಮ ಮಹಾಶಕ್ತಿಯ ಪ್ರಕಾರ ಸಾಯುವುದಕ್ಕಿರುವವರನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:11
11 ತಿಳಿವುಗಳ ಹೋಲಿಕೆ  

ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.


ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಆಗ ಚೀಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು: ಅವರು ಆತನ ಹೆಸರನ್ನು ಜೆರುಸಲೇಮಿನಲ್ಲಿ ಸ್ತುತಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು