Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:4 - ಪರಿಶುದ್ದ ಬೈಬಲ್‌

4 ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣವರ ಪರಿಹಾಸ್ಯ ಕುಚೋದ್ಯಗಳಿಗೆ ಗುರಿಯಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:4
23 ತಿಳಿವುಗಳ ಹೋಲಿಕೆ  

ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಆದ್ದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನ್ನ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.’”


ಆಗ ನಿನ್ನ ಎಲ್ಲಾ ತುಚ್ಛಮಾತುಗಳನ್ನು ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವೆ. “ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನ್ನೆಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನ್ನು ಲೂಟಿ ಮಾಡೋಣ’ ಎಂದು ನೀನು ಹೇಳಿದಿ.


ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’


ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಅವನ ನೆರೆಹೊರೆಯವರು ಅವನನ್ನು ನೋಡಿ ನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು.


ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.


ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿಹೋಗಿರುವೆ.


ನಿನ್ನ ನಾಚಿಕೆಯನ್ನು ತೆಗೆದುಬಿಡುವನು. ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು