ಕೀರ್ತನೆಗಳು 79:5 - ಪರಿಶುದ್ದ ಬೈಬಲ್5 ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು? ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.