Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:9 - ಪರಿಶುದ್ದ ಬೈಬಲ್‌

9 ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:9
17 ತಿಳಿವುಗಳ ಹೋಲಿಕೆ  

“ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.


ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.


ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.


“ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.


ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡಬೇಡ. ಈಗಲೇ ಸಹಾಯಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನ್ನ ಹೆಸರನ್ನು ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಬ ವಾಗ್ದಾನದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನ್ನು ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನ್ನು ಅವರ ಮುಂದೆ ನಾಶಮಾಡಲಿಲ್ಲ.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ; ನಮ್ಮನ್ನು ಆ ಪಾಪಗಳಿಂದ ಬಿಡಿಸು.


ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.


ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.


ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಇಸ್ರೇಲ್ ಜನಾಂಗಗಳೇ, ನೀವು ಅನೇಕ ಕೆಟ್ಟ ವಿಷಯಗಳನ್ನು ಮಾಡಿರುತ್ತೀರಿ. ಆ ದುಷ್ಕೃತ್ಯಗಳಿಗಾಗಿ ನೀವು ನಾಶವಾಗಿ ಹೋಗಬೇಕಾಗಿತ್ತು. ಆದರೆ ನನ್ನ ಒಳ್ಳೆಯ ಹೆಸರಿನ ಸಲುವಾಗಿ ನೀವು ಹೊಂದಬೇಕಾದ ಶಿಕ್ಷೆಯನ್ನು ನಾನು ನಿಮಗೆ ವಿಧಿಸುವುದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು