ಕೀರ್ತನೆಗಳು 8:5 - ಪರಿಶುದ್ದ ಬೈಬಲ್5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |