Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:6 - ಪರಿಶುದ್ದ ಬೈಬಲ್‌

6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:6
10 ತಿಳಿವುಗಳ ಹೋಲಿಕೆ  

ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.


ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.


ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.” ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.


ದೇವರು ಪ್ರತಿಯೊಂದನ್ನು ಕ್ರಿಸ್ತನ ಅಧಿಕಾರಕ್ಕೆ ಒಳಪಡಿಸಿದನು. ಸಭೆಗೋಸ್ಕರವಾಗಿ ದೇವರು ಆತನನ್ನು ಪ್ರತಿಯೊಂದರ ಮೇಲೆ ಶಿರಸ್ಸನ್ನಾಗಿ ಮಾಡಿದನು.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು