Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:11 - ಪರಿಶುದ್ದ ಬೈಬಲ್‌

11 ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ I ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರ ಕೊಂಬೆಗಳು ಸಮುದ್ರದವರೆಗೂ ಅದರ ರೆಂಬೆಗಳು ಮಹಾನದಿಯವರೆಗೂ ಹರಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದು ತನ್ನ ರೆಂಬೆಗಳನ್ನು ಸಮುದ್ರದವರೆಗೂ, ತನ್ನ ಬಳ್ಳಿಗಳನ್ನು ನದಿಯವರೆಗೂ ಹರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:11
6 ತಿಳಿವುಗಳ ಹೋಲಿಕೆ  

ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ.


ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.


ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು