Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:2 - ಪರಿಶುದ್ದ ಬೈಬಲ್‌

2 ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶೋಭಿಸು ಎಫ್ರಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ I ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಫ್ರಾಯೀಮ್ ಬೆನ್ಯಾಮೀನ್ ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ ನಿಮ್ಮ ಪರಾಕ್ರಮವನ್ನು ತೋರಿಸಲು ಬಂದು ನಮ್ಮನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:2
14 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು! ಎದ್ದೇಳು! ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು.


ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.


ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.


ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.


ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!


ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು