Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:3 - ಪರಿಶುದ್ದ ಬೈಬಲ್‌

3 ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:3
12 ತಿಳಿವುಗಳ ಹೋಲಿಕೆ  

ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು.


ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.


ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ, ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.


ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.


“ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಈ ಜನರಿಗೆಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು.


ನಿನ್ನ ಸೇವಕನ ಮೇಲೆ ಕರುಣೆಯಿರಲಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು.


ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು