ಕೀರ್ತನೆಗಳು 80:8 - ಪರಿಶುದ್ದ ಬೈಬಲ್8 ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.