ಕೀರ್ತನೆಗಳು 81:14 - ಪರಿಶುದ್ದ ಬೈಬಲ್14 ಅವರ ಶತ್ರುಗಳನ್ನು ಸೋಲಿಸುವೆನು; ಇಸ್ರೇಲಿಗೆ ಕೇಡುಮಾಡುವವರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಅಡಗಿಸುತ್ತಿದ್ದೆ ಅವರ ಶತ್ರುಗಳನು ಸುಲಭವಾಗಿ I ಸದೆಬಡಿಯುತ್ತಿದ್ದೆ ಅವರ ವೈರಿಗಳನು ಸರಿಯಾಗಿ, II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ ಅವರ ಶತ್ರುಗಳನ್ನು ಸುಲಭವಾಗಿ ಅಣಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.