Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:2 - ಪರಿಶುದ್ದ ಬೈಬಲ್‌

2 ವಾದ್ಯವನ್ನು ನುಡಿಸಲಾರಂಭಿಸಿರಿ; ದಮ್ಮಡಿಯನ್ನು ಬಡಿಯಿರಿ. ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆರಂಭಿಸಿ ಸಂಗೀತವನು, ಬಾರಿಸಿ ಮೃದಂಗವನು I ನುಡಿಸಿರಿ ಮಧುರ ವೀಣೆಯನು, ಸ್ವರಮಂಡಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ ಸ್ವರಮಂಡಲವನ್ನೂ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:2
11 ತಿಳಿವುಗಳ ಹೋಲಿಕೆ  

ಆಗ ಶಿಷ್ಯರೆಲ್ಲರೂ ಒಂದು ಹಾಡನ್ನು ಹಾಡಿದರು. ನಂತರ ಅವರು ಆಲಿವ್ ಮರದ ಗುಡ್ಡಕ್ಕೆ ಹೋದರು.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.


ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು.


ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು